+91-8482-245241 regkvafsu@gmail.com

ಪಶುವೈದ್ಯಕೀಯ ಮಹಾವಿದ್ಯಾಲಯ, ಗದಗ

ಕರ್ನಾಟಕ ಸರ್ಕಾರವು ಪಶುವೈದ್ಯಕೀಯ ಮಹಾವಿದ್ಯಾಲಯ, ಗದಗವನ್ನು ರಾಜ್ಯದ ಐದನೇ ಪಶುವೈದ್ಯಕೀಯ ಮಹಾವಿದ್ಯಾಲಯವಾಗಿ 2017-2018ನೇ ಸಾಲಿನಲ್ಲಿ ಪ್ರಾರಂಭಿಸಿತು. ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ವ್ಯಾಪ್ತಿಗೆ ಮಹಾವಿದ್ಯಾಲಯವು ಸೇರಿದೆ. ದಿನಾಂಕ 25.09.2017ರಂದು 50 ವಿದ್ಯಾರ್ಥಿಗಳ ಪ್ರವೇಶದೊಂದಿಗೆ ಪಶುವೈದ್ಯಕೀಯ ಸ್ನಾತಕ ಪದವಿಯ ಮೊದಲನೇ ತಂಡದ ತರಗತಿಗಳು ಆರಂಭವಾದವು. ಗದಗ-ಹೊಂಬಳ ರಸ್ತೆಯಲ್ಲಿ 162 ಎಕರೆ ಪ್ರದೇಶದಲ್ಲಿ ಮಹಾವಿದ್ಯಾಲಯವು ಮೂಲ ಸೌಕರ್ಯಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ. ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ನಿಯಮಾನುಸಾರ ಮತ್ತು ವಿಶ್ವವಿದ್ಯಾಲಯದ ಮಾರ್ಗಸೂಚಿಗಳ ಪ್ರಕಾರ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡಲಾಗಿದೆ.

ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಚಟುವಟಿಕೆಗಳ ಜೊತೆಗೆ, ಜಾನುವಾರುಗಳಿಗೆ ಮತ್ತು ಕಾಡು ಪ್ರಾಣಿಗಳಿಗೆ ಚಿಕಿತ್ಸೆ, ಮರಣೋತ್ತರ ಪರೀಕ್ಷೆ, ಪ್ರಾಣಿಗಳ ರೋಗ ನಿಧಾನ ಪತ್ತೆಮಾಡುವ ಸೇವೆಗಳನ್ನು ನೀಡುತ್ತಿದ್ದಾರೆ. ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ, ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಸನ, ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುವತ್ತ ಕೂಡ ನಿರಂತರ ಪ್ರಯತ್ನ ಮಾಡಲಾಗುತ್ತಿದೆ.

ಪಶುವೈದ್ಯಕೀಯ ಮತ್ತು ಪಶು ಸಂಗೋಪನೆಗೆ ಸಂಬಂಧಿಸಿದ ಬೋಧನೆ, ಸಂಶೋಧನೆ ಮತ್ತು ವಿಸ್ತರಣಾ ಶಿಕ್ಷಣ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಮತ್ತು ನಾಯಕತ್ವವುಳ್ಳ ಸಮರ್ಥ ಪಶುವೈದ್ಯರನ್ನು ರೂಪಿಸುವುದು ಮತ್ತು ರಾಜ್ಯದ ಜಾನುವಾರುಗಳಲ್ಲಿ ಉತ್ಪಾದನೆ ಹೆಚ್ಚಿಸುವುದು ಈ ಮಹಾವಿದ್ಯಾಲಯದ ಪ್ರಮುಖ ಉದ್ದೇಶವಾಗಿದೆ.